ಗೋವಿನ ಹಾಡು

Image by Ilona Ilyés from Pixabay

“ಧರಣಿಮಂಡಲ ಮಧ್ಯದೊಳಗೆ” ಎಂದು ಶುರುವಾಗುವ ಪುಣ್ಯಕೋಟಿ ಹಾಡು ನಮ್ಮ ಜಾನಪದದ ಪ್ರಸಿದ್ಧ ಕತೆ . ಎಷ್ಟೇ ಕಷ್ಟವಾದರೂ ಸರಿ ಸತ್ಯವೇ ನಾನು ನಡೆವ ದಾರಿ ಎಂದು ಮನಸಿಗೆ ಹತ್ತಿರವವಾಗುವಂತೆ ಸುಲಭ ಸಾಹಿತ್ಯದಲ್ಲಿ ಹೇಳಿರುವ ಕತೆಯ ಹಾಡು.

ಧರಣಿಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ನಾಟ ದೇಶದೊ
ಳಿರುವ ಕಾಳಿಂಗನೆಂಬ ಗೊಲ್ಲನ ಪರಿಯನೆಂತು
ಪೇಳ್ವೆನೊ ಗೊಲ್ಲ ದೊಡ್ಡಿಯಲಿರುವ ಪಶುಗಳ

ಎಲ್ಲ ಬೆಟ್ಟದ ಮೇಲೆ ಮೇಯುತ
ಹುಲ್ಲುವೊಳ್ಳೆ ನೀರ್ಗಳಿಂದಲೆ
ಅಲ್ಲಿ ಮೆರೆದವರಣ್ಯದಿ
ಎಳೆಯ ಮಾವಿನ ಮರದ ಕೆಳಗೆ
ಕೊಳಲನೂದುತ ಗೊಲ್ಲ ಗೌಡನು
ಬಳಸಿ ನಿಂದ ತುರುಗಳನ್ನು ಬಳಿಗೆ ಕರೆದನು ಹರುಷದಿ

ಗಂಗೆ ಬಾರೆ ಗೌರಿ ಬಾರೆ
ತುಂಗಭದ್ರೆ ತಾಯಿ ಬಾರೆ
ಪುಣ್ಯಕೋಟಿ ನೀನು ಬಾರೆ
ಎಂದು ಗೊಲ್ಲನು ಕರೆದನು


ಗೊಲ್ಲ ಕರೆದಾ ದನಿಯ ಕೇಳಿ
ಎಲ್ಲ ಹಸುಗಳು ಬಂದು ನಿಂದು
ಚೆಲ್ಲಿ ಸೂಸಿ ಹಾಲು ಕರೆಯಲು
ಅಲ್ಲಿ ತುಂಬಿತು ಬಿಂದಿಗೆ

ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು

ಹಬ್ಬಿದಾಮಲೆ ಮಧ್ಯದೊಳಗೆ
ಅರ್ಭುತಾನೆಂದೆಂಬ ವ್ಯಾಘ್ರನು
ಅಬ್ಬರಿಸಿ ಹಸಿಹಸಿದು ಬೆಟ್ಟದ
ಕಿಬ್ಬಿಯಾಳು ತಾನಿದ್ದನು

ಸಿಡಿದು ರೋಷದಿ ಗುಡುಗುತಾ ಹುಲಿ
ಘುಡುಘುಡಿಸಿ ಭೋರಿಡುತ ಚಂಗನೆ
ತುಡುಕಿ ಎರಗಿದ ರಭಸಕಂಜಿ
ಚದುರಿ ಹೋದವು ಹಸುಗಳು

ಪುಣ್ಯಕೋಟಿಯೆಂಬ ಹಸುವು
ತನ್ನ ಕಂದನ ನೆನೆದುಕೊಂಡು
ಮುನ್ನ ಹಾಲನು ಕೊಡುವೆನೆನುತ
ಚೆಂದದಿ ತಾ ಬರುತಿರೆ

ಇಂದೆನಗೆ ಆಹಾರ ಸಿಕ್ಕಿತು
ಎಂದು ಬೇಗನೆ ದುಷ್ಟ ವ್ಯಾಘ್ರನು
ಬಂದು ಬಳಸಿ ಅಡ್ಡಗಟ್ಟಿ
ನಿಂದನಾ ಹುಲಿರಾಯನು

ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು

ಮೇಲೆ ಬಿದ್ದು ನಿನ್ನನೀಗಲೆ
ಬೀಳಹೊಯ್ವೆನು ನಿನ್ನ ಹೊಟ್ಟೆಯ
ಸೀಳಿಬಿಡುವೆನು ಎನುತ ಕೋಪದಿ
ಖೂಳವ್ಯಾಘ್ರನು ಕೂಗಲು

ಒಂದು ಬಿನ್ನಹ ಹುಲಿಯೆ ಕೇಳು
ಕಂದನಿರುವನು ದೊಡ್ಡಿಯಾಳಗೆ
ಒಂದು ನಿಮಿಷದಿ ಮೊಲೆಯ ಕೊಟ್ಟು
ಬಂದು ಸೇರುವೆನಿಲ್ಲಿಗೆ

ಹಸಿದವೇಳೆಗೆ ಸಿಕ್ಕಿದೊಡವೆಯ
ವಶವ ಮಾಡದೆ ಬಿಡಲು ನೀನು
ನುಸುಳಿ ಹೋಗುವೆ ಮತ್ತೆ ಬರುವೆಯ
ಹುಸಿಯ ನುಡಿಯುವೆನೆಂದಿತು

ಸತ್ಯವೆ ನಮ್ಮ ತಾಯಿ ತಂದೆ ಸತ್ಯವೆ
ನಮ್ಮ ಬಂಧು ಬಳಗ
ಸತ್ಯವಾಕ್ಯಕೆ ತಪ್ಪಿ ನಡೆದರೆ
ಮೆಚ್ಚನಾ ಪರಮಾತ್ಮನು

ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು

ಕೊಂದು ತಿನ್ನುವೆನೆಂಬ ಹುಲಿಗೆ
ಚಂದದಿಂದ ಭಾಷೆಕೊಟ್ಟು
ಕಂದ ನಿನ್ನನು ನೋಡಿ ಪೋಗುವೆ
ನೆಂದು ಬಂದಿತು ದೊಡ್ಡಿಗೆ

ಅಮ್ಮ ನೀನು ಸಾಯಲೇಕೆ
ನನ್ನ ತಬ್ಬಲಿ ಮಾಡಲೇಕೆ
ಸುಮ್ಮನಿಲ್ಲಿಯೆ ನಿಲ್ಲು ಎಂದು
ಅಮ್ಮನಿಗೆ ಕರು ಹೇಳಿತು

ಕೊಟ್ಟ ಭಾಷೆಯ ತಪ್ಪಲಾರೆನು
ಕೆಟ್ಟ ಯೋಚನೆ ಮಾಡಲಾರೆನು
ನಿಷ್ಠೆಯಿಂದಲಿ ಪೋಪೆನಲ್ಲಿಗೆ
ಕಟ್ಟ ಕಡೆಗಿದು ಖಂಡಿತಾ

ಆರ ಮೊಲೆಯನು ಕುಡಿಯಲಮ್ಮ
ಆರ ಬಳಿಯಲಿ ಮಲಗಲಮ್ಮ
ಆರ ಸೇರಿ ಬದುಕಲಮ್ಮ
ಆರು ನನಗೆ ಹಿತವರು

ಅಮ್ಮಗಳಿರ ಅಕ್ಕಗಳಿರ
ಎನ್ನ ತಾಯಾಡಹುಟ್ಟುಗಳಿರಾ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ

ಮುಂದೆ ಬಂದರೆ ಹಾಯಬೇಡಿ
ಹಿಂದೆ ಬಂದರೆ ವೊದೆಯಬೇಡಿ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ

ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು

ತಬ್ಬಲಿಯು ನೀನಾದೆ ಮಗನೆ
ಹೆಬ್ಬುಲಿಯ ಬಾಯನ್ನು ಹೊಗುವೆನು
ಇಬ್ಬರಾ ಋಣ ತೀರಿತೆಂದು
ತಬ್ಬಿಕೊಂಡಿತು ಕಂದನಾ

ಗೋವು ಕರುವನು ಬಿಟ್ಟು ಬಂದು
ಸಾವಕಾಶವ ಮಾಡದಂತೆ
ಗವಿಯ ಬಾಗಿಲ ಸೇರಿ ನಿಂತು
ತವಕದಲಿ ಹುಲಿಗೆಂದಿತು

ಖಂಡವಿದೆಕೋ ಮಾಂಸವಿದೆಕೋ
ಗುಂಡಿಗೆಯ ಬಿಸಿರಕ್ತವಿದೆಕೋ
ಚಂಡವ್ಯಾಘ್ರನೆ ನೀನಿದೆಲ್ಲವ
ನುಂಡು ಸಂತಸದಿಂದಿರು

ಪುಣ್ಯಕೋಟಿಯ ಮಾತಕೇಳಿ
ಕಣ್ಣನೀರನು ಸುರಿಸಿ ನೊಂದೂ
ಕನ್ನೆಯಿವಳನು ಕೊಂದು ತಿಂದರೆ
ಮೆಚ್ಚನಾ ಪರಮಾತ್ಮನೂ

ಎನ್ನವೊಡಹುಟ್ಟಕ್ಕ ನೀನು
ನಿನ್ನ ಕೊಂದು ಏನ ಪಡೆವೆನು
ಎನ್ನುತಾ ಹುಲಿ ಹಾರಿ ನೆಗೆದು
ತನ್ನ ಪ್ರಾಣವ ಬಿಟ್ಟಿತು

ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು

ಪುಣ್ಯಕೋಟಿಯು ನಲಿದು ಕರುವಿಗೆ
ಉಣ್ಣಿಸಿತು ಮೊಲೆಯ ಬೇಗದಿ
ಚೆನ್ನಗೊಲ್ಲನ ಕರೆದು ತಾನು
ಮುನ್ನ ತಾನಿಂತೆಂದಿತು

ಎನ್ನ ವಂಶದ ಗೋವ್ಗಳೊಳಗೆ
ನಿನ್ನ ವಂಶದ ಗೊಲ್ಲರೊಳಗೆ
ಮುನ್ನ ಪ್ರತಿ ಸಂಕ್ರಾತಿಯೊಳಗೆ
ಚೆನ್ನ ಕೃಷನ ಭಜಿಸಿರಿ

ಇವನು ಸೌಭಾಗ್ಯ ಸಂಪದ
ಭಾವ ಜಾಪಿತ ಕೃಷ್ಣನು

Spread the Knowledge

You may also like...

Leave a Reply

Your email address will not be published. Required fields are marked *